Sunday, June 14, 2026
spot_imgspot_img
spot_imgspot_img

ಉಡುಪಿ: ಹಾರ್ನ್ ಹಾಕಿದ್ದಕ್ಕೆ ಅಡ್ಡಗಟ್ಟಿ ಬಸ್ ಚಾಲಕನ ಮೇಲೆ ಕಾರು ಚಾಲಕನಿಂದ ಹಲ್ಲೆ..!

- Advertisement -
- Advertisement -

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ ಬಸ್ ಡ್ರೈವರಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್ ಪಡುಬಿದ್ರೆ ಯ ಎರ್ಮಾಳ್ ಬಳಿ ಮುಂದಿನಿಂದ ಹೋಗುತ್ತಿದ್ದ ಕಾರು ಚಾಲಕನಿಗೆ ಹಾರ್ನ್ ಹಾಕಿ ಓವರ್ ಡೇಕ್ ಮಾಡಲು ಯತ್ನಿಸಿದ್ದಾನೆ. ಬಸ್ಸಿನ ಕರ್ಕಶ ಹಾರ್ನ್‌ಗೆ ಆಕ್ರೋಶಗೊಂಡ ಕಾರು ಚಾಲಕ ಬಸ್ಸನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಇರಿದು ಬಳಿಕ ಬಸ್ಸಿನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಇರಿತಕ್ಕೊಳಗಾದ ಚಾಲಕನನ್ನು ಬಸ್ ಚಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ .

- Advertisement -

Related news

error: Content is protected !!