Friday, September 25, 2026
spot_imgspot_img
spot_imgspot_img

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

- Advertisement -
- Advertisement -

ಉಡುಪಿ: ಸಮೀಪದ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರು ಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.

ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಪೆಟ್ರೋಲ್ ಪಂಪ್ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಬಸ್‌ನ ಸಮೀಪದಲ್ಲೇ ಇನ್ನೆರಡು ಬಸ್‌ಗಳು ಹಾಗೂ ಟೆಂಪೋ ನಿಲ್ಲಿಸಲಾಗಿತ್ತು. ಅಲ್ಲದೆ, ಪಕ್ಕದಲ್ಲೇ ಪೆಟ್ರೋಲ್ ಪಂಪ್ ಇದ್ದ ಕಾರಣ ಬೆಂಕಿ ಇತರ ವಾಹನಗಳಿಗೆ ಅಥವಾ ಪೆಟ್ರೋಲ್ ಪಂಪ್‌ಗೆ ವ್ಯಾಪಿಸಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅಪಾಯವೊಂದು ಸಣ್ಣದರಲ್ಲೇ ತಪ್ಪಿದಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ ಬಸ್‌ಗೆ ಭಾರೀ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ. ಪೆಟ್ರೋಲ್ ಪಂಪ್‌ನ ಮಾಲೀಕರು ಹಾಗೂ ಬೆಂಕಿಗಾಹುತಿಯಾದ ಬಸ್‌ನ ಮಾಲೀಕರು ಒಬ್ಬರೇ ಎಂದು ತಿಳಿದುಬಂದಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!