Saturday, June 28, 2025
spot_imgspot_img
spot_imgspot_img

ಉಡುಪಿ: ಬೆಳ್ಳಂಬೆಳಗ್ಗೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಮಾಜಿ ಜಿ.ಪಂ. ಸದಸ್ಯನ ಸ್ಥಿತಿ ಗಂಭೀರ

- Advertisement -
- Advertisement -

ಉಡುಪಿ: ರಾಷ್ಟ್ರೀ ಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ ಸದಸ್ಯ ರತ್ನಾಕರ್ ನಾಯ್ಕ್ ಎಂದು ಗುರುತಿಸಲಾಗಿದೆ.

ಕುಂದಾಪುರದಿಂದ ಕಾರವಾರ ಕಡೆಗೆ ಸಾಗುತ್ತಿದ್ದ ಕಾರು ಅಕಸ್ಮಾತ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ರತ್ನಾಕರ್ ನಾಯ್ಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರನ್ನು ಮಣಿಪಾಲ್ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!