Saturday, June 27, 2026
spot_imgspot_img
spot_imgspot_img

ಪಾವಂಜೆ : ನದಿಗೆ ಬಿದ್ದ ಕಾರು -ಈಜಿ ದಡ ಸೇರಿದ ಪ್ರಯಾಣಿಕರು !!

- Advertisement -
- Advertisement -

ಹಳೆಯಂಗಡಿ: ಹಳೆಯಂಗಡಿ ಪಾವಂಜೆ ಸೇತುವೆ ಬಳಿ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಂದಿನಿ ನದಿಗೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾಟಿಪಳ್ಳದ ನಿವಾಸಿ ಅಶ್ರಫ್ ಎಂಬವರು ತನ್ನ ಸ್ನೇಹಿತನೊಂದಿಗೆ ಪಾವಂಜೆ ಸೇತುವೆ ಬಳಿಯಿಂದ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸೇತುವೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ನಂದಿನಿ ನದಿಗೆ ಇಳಿದಿದೆ. ಕಾರು ನದಿಯಲ್ಲಿ ಮುಳುಗುತ್ತಿದ್ದಂತೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರಿನಿಂದ ಹೊರಬಂದು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು. ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆತ್ತಲು ವ್ಯವಸ್ಥೆ ಮಾಡಿದ್ದಾರೆ.

- Advertisement -

Related news

error: Content is protected !!