Friday, June 5, 2026
spot_imgspot_img
spot_imgspot_img

ಬ್ರಹ್ಮಾವರ: ಗುಂಡಿಕ್ಕಿ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು..!

- Advertisement -
- Advertisement -

ಬ್ರಹ್ಮಾವರ: ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ನಡೆದಿದೆ.

ಕೊಲೆಯಾದ ವ್ಯಕ್ತಿ ಕೃಷ್ಣ(38) ಎಂದು ಗುರುತಿಸಲಾಗಿದೆ.

ಈತ ಗಾರೆ ಕೆಲಸ ಮಾಡಿಕೊಂಡಿದ್ದ ಕೃಷ್ಣ ವಿವಾಹಿತನಾಗಿದ್ದರೂ ಮನೆಯಲ್ಲಿ ಒಬ್ಬನೇ ವಾಸವಾಗಿದ್ದರು ಎಂದು ತಿಳಿದು ಬಂದಿದೆ.ಇವನನ್ನು ಯಾರೂ ದುಷ್ಕರ್ಮಿಗಳು ಗುಂಡು ಹರಿಸಿ ಹತ್ಯೆ ಮಾಡಲಾಗಿದೆ. ಒಟ್ಟು ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್, ಬ್ರಹ್ಮಾವರ ವೃತ್ತ ನಿರೀಕ್ಷಕರಾದ ದಿವಾಕರ್ ಪಿ. ಎಂ. ಹಾಗೂ ಠಾಣಾಧಿಕಾರಿ ಮಧು ಬಿ.ಇ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯ ಎಸಗಲು ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!