Friday, May 3, 2024
spot_imgspot_img
spot_imgspot_img

ಉಡುಪಿ: ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಯುವಕ!

- Advertisement -G L Acharya panikkar
- Advertisement -

ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರದ ಕನಕೋಡದಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸಾವನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ.

ಮಲ್ಪೆ ಕೊಡವೂರು ನಿವಾಸಿ ಮೋಕ್ಷಿತ್ ಕರ್ಕೇರಾ(25) ಎಂಬ ಮೃತ ಯುವಕ ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಚಿಕ್ಕಪ್ಪ ಶಂಕರ ಎಂಬವರ ಮನೆಯಲ್ಲಿ ಭಾರೀ ಗಾಳಿ ಮಳೆಗೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಇದನ್ನು ಗಮನಿಸಿದ ಮೋಕ್ಷಿತ್ ಮೈನ್‌ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಶಾಕ್ ತಗುಲಿದೆ. ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದರು.

ಮನೋಜ್‍ ಕರ್ಕೇರಾ ಮತ್ತು ಶಶಿಕಲಾ ದಂಪತಿಯ ಇಬ್ಬರು ಪುತ್ರರಲ್ಲಿ ಮೋಕ್ಷಿತ್ ಹಿರಿಯವರಾಗಿದ್ದರು. ಮೃತರು ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದು, ಮೆಕ್ಯಾನಿಕ್, ಡೆಕೋರೇಟರ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದರು. ಬಿಡುವಿನ ವೇಳೆ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು‌ ಮಾರಾಟಕ್ಕೂ ಕೈ ಜೋಡಿಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!