Thursday, June 18, 2026
spot_imgspot_img
spot_imgspot_img

ಉಡುಪಿ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

- Advertisement -
- Advertisement -

ಉಡುಪಿ: ವಸತಿ ಸಂಕೀರ್ಣವೊಂದರ ನಾಲ್ಕನೇ ಮಹಡಿಯಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟು ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮೃತಪಟ್ಟ ಬ್ಯಾಂಕ್ ಉದ್ಯೋಗಿ ಗೋಪಾಲ ಕೃಷ್ಣ ಎಂದು ಗುರುತಿಸಲಾಗಿದೆ.

ಖಾಸಗಿ ಬ್ಯಾಂಕ್‌ನ ಉದ್ಯೋಗಿಯಾಗಿದ್ದ ಗೋಪಾಲ ಕೃಷ್ಣ ಅವರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಉಡುಪಿ ಟೌನ್ ಠಾಣೆಯ ಸಹಾಯಕ ಸಬ್-ಇನ್ಸ್ಪೆಕ್ಟರ್ ಜಯಕರ್ ಮತ್ತು ಅವರ ತಂಡವು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು.

ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು.

- Advertisement -

Related news

error: Content is protected !!