Tuesday, April 20, 2021
spot_imgspot_img
spot_imgspot_img

ಉಡುಪಿ: ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಶಿಕ್ಷಣಾಧಿಕಾರಿ ಕೆ. ಮಂಜುಳ ಅಮಾನತು!

ಉಡುಪಿ: ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಮಂಜುಳ ಅವರು ಉಡುಪಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಶಾಲೆಯಿಂದ ಅಗತ್ಯವಿರುವ ಶಾಲೆಗಳಿಗೆ ನಿಯೋಜನೆ ಮಾಡಿ, ಆ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯಮಗಳಿಗೆ ವಿರುದ್ಧವಾಗಿ ನೇಮಕಾತಿ ಮಾಡಿದ್ದರು ಎಂಬ ಆರೋಪವಿದೆ. ಕಚೇರಿಯ ಕರ್ತವ್ಯ ನಿರ್ವಹಣೆ, ಅತಿಥಿ ಶಿಕ್ಷಕರ ನಿಯೋಜನೆ ಮತ್ತು ಅಕ್ಷರ ದಾಸೋಹ ಕಾರ್ಯಕ್ರಮ ಸರಿಯಾಗಿ ನಿರ್ವಹಿಸದಿರುವ ಆರೋಪವೂ ಇವರ ಮೇಲಿತ್ತು. ಕಚೇರಿಯ ವಾಹನದ ದುರಸ್ಥಿಗೆ ಆರ್ ಟಿ ಓ ಪೂರ್ವಾನುಮತಿ ಪಡೆಯದೇ ವಾಹನ ದುರಸ್ಥಿ ಮಾಡಿಸಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎರ್ಮಾಳು ಈ ಶಾಲಾ ಮೈದಾನದ 0.1 ಎಕರೆ ಸ್ಥಳವನ್ನು ರಾಷ್ಟ್ರೀಯ ಹೆದ್ದಾರಿಗೆ ನೀಡಿದ್ದ ಕಾರಣ ಪರಿಹಾರದ ಮೊತ್ತ ₹15.03 ಲಕ್ಷ ಖಾತೆಗೆ ಜಮೆಯಾಗಿತ್ತು.

ಈ ಮೊತ್ತದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ₹8 ಲಕ್ಷ ಹಾಗೂ ಕಾಂಪೌಂಡ್ ನಿರ್ಮಾಣಕ್ಕಾಗಿ ₹ 7,03,184 ಗಳನ್ನು ಶಾಲಾ ಎಸ್.ಡಿ.ಎಂ.ಸಿ ಖಾತೆಗೆ ಪಾವತಿಸಿದ್ದರು. ಇಲ್ಲಿಯೂ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದರು. ಕರ್ತವ್ಯ ಲೋಪದ ಆರೋಪಗಳ ಬಗ್ಗೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಈ ಕೂಡಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ರಾಜ್ಯಪಾಲರ ಆದೇಶದನುಸಾರ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಸದ್ಯ ಮಂಜುಳ ಅವರನ್ನು ಮಂಗಳೂರಿನ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

driving
- Advertisement -

MOST POPULAR

HOT NEWS

Related news

error: Content is protected !!