- Advertisement -
- Advertisement -
ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
- Advertisement -