Thursday, July 23, 2026
spot_imgspot_img
spot_imgspot_img

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಕ್ಕಿ ಗಿರಣಿಯಲ್ಲಿ ಬೆಂಕಿ..!

- Advertisement -
- Advertisement -

ಗಿರಣಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಉರಿದು ಕಾರ್ಖಾನೆಯಲ್ಲಿ ಸಂಗ್ರಹಿಸಲಾಗಿದ್ದ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಸ್ ನಿಲ್ದಾಣದ ಬಳಿ ನಡೆದಿದೆ.

ಸಂಜೆ ವೇಳೆಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು. ಗಿರಣಿಯ ಹೆಚ್ಚಿನ ಭಾಗ ಬೆಂಕಿಗೆ ಆಹುತಿಯಾಗಿದೆ.

ಉಡುಪಿಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

- Advertisement -

Related news

error: Content is protected !!