Friday, June 19, 2026
spot_imgspot_img
spot_imgspot_img

ಉಡುಪಿ: ದುಬೈ ಫಾರ್ಚ್ಯೂನ್ ಸಂಸ್ಥೆಗೆ ವಂಚನೆ ಪ್ರಕರಣ; ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

- Advertisement -
- Advertisement -

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಇದೀಗ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಬಳಿಕ ಆರೋಪಿ ನಾಗೇಶ್ ಪೂಜಾರಿಯನ್ನು 3 ದಿನಗಳ ಕಾಲ ಕಸ್ಟಡಿಗೆ ಪಡೆದು ಅ.16ರಂದು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21ಕ್ಕೆ ನಿಗದಿಪಡಿಸಲಾಗಿತ್ತು.

- Advertisement -

Related news

error: Content is protected !!