- Advertisement -
- Advertisement -






ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ವರದಿಯಾಗಿದೆ.
ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದೆಂದು ದೀಪ್ತಿ (26) ಎಂಬವರಿಗೆ ವಾಟ್ಸ್ಅಪ್ ಟೆಲಿಗ್ರಾಂ ಆ್ಯಪ್‌ನಲ್ಲಿ ಆಮಿಷ ಒಡ್ಡಿದ ಅಪರಿಚಿತರು ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 4.92 ಲಕ್ಷ ರೂ.ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ದೀಪ್ತಿ ಅವರು ಉಡುಪಿಯ ಸೆನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.
- Advertisement -