Tuesday, July 23, 2024
spot_imgspot_img
spot_imgspot_img

ಉಡುಪಿ: ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ..!

- Advertisement -G L Acharya panikkar
- Advertisement -

ಉಡುಪಿ: ಕೆಲವು ದಿನಗಳ ಹಿಂದೆ ಉಡುಪಿ ನಗರದಲ್ಲಿ ದಾಳಿ ನಡೆಸಿ ಬಂಧಿತರಾಗಿರುವ ಗರುಡ ಗ್ಯಾಂಗ್ ವಾರ್ ಆರೋಪಿಗಳು ಜೈಲಿನಲ್ಲಿ ಜೈಲು ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ವಿಚಾರಣಾ ಕೈದಿ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಜಿಲ್ಲಾ ಜೈಲ್ ಅಧೀಕ್ಷಕ, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಕರೆ ಮಾಡಲು ತಡವಾಯಿತೆಂದು ಜೈಲರ್ ಎಸ್.ಎ.ಶಿರೋಳಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿಗಳನ್ನು ತಳ್ಳಿ ಕೊಠಡಿಯಲ್ಲಿದ್ದ ಕುರ್ಚಿಯಿಂದ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ ಅಡುಗೆ ಕೋಣೆಯಲ್ಲಿದ್ದ ಚಹಾ ಪಾತ್ರೆಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧಪಟ್ಟಂತೆ ಇದೀಗ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!