Tuesday, May 21, 2024
spot_imgspot_img
spot_imgspot_img

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್‍ ಸ್ಪೋಟ; ಇಬ್ಬರು ಸಜೀವ ದಹನ

- Advertisement -G L Acharya panikkar
- Advertisement -
vtv vitla
vtv vitla

ಕಾಪು ಸಮೀಪದ ಫಕೀರ್ನಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ನಡೆದಿದೆ. ರಜಾಕ್ ಮಲ್ಲಾರ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕಾಪು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

- Advertisement -

Related news

error: Content is protected !!