Wednesday, July 29, 2026
spot_imgspot_img
spot_imgspot_img

ಉಡುಪಿ: ನಟ ಪ್ರಕಾಶ್ ರಾಜ್ ಕರಾವಳಿಗೆ ಬಂದು ಅಧಿಕಪ್ರಸಂಗ ಮಾಡಿದರೆ ಸಮುದ್ರ ನೋಡಿಕೊಳ್ಳಬೇಕಾಗುತ್ತದೆ

- Advertisement -
- Advertisement -

ಸಿಜೆಪಿ ವಿರುದ್ದ ಸಿಡಿದೆದ್ದ ಶಾಸಕ ಯಶ್‌ಪಾಲ್ ಸುವರ್ಣ; ಎಫ್‌ಐಆರ್ ದಾಖಲು

ಉಡುಪಿ: ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ಉಡುಪಿಯ ಜಟ್ಕಾಸ್ಟ್ಯಾಂಡ್ ಬಳಿ ಮಂಗಳವಾರ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ ಯ ಕಲಂ 57, 192, 196(2), 352, 353(2) ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ಮಾಹಿತಿ ನೀಡಿದ್ದು “ನಿನ್ನೆ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್ ಸುವರ್ಣ ಅವರು ಪ್ರಚೋದನಕಾರಿ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್, ರಾಹುಲ್ ಗಾಂಧಿ ಹಾಗೂ ಕಾಕ್ರೋಚ್’ ಪಾರ್ಟಿ ವಿರುದ್ಧ ಘೋಷಣೆ ಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಜತೆಗೆ ರಾಹುಲ್ ಗಾಂಧಿ, ಅರವಿಂದ ಕೇಜ್ರವಾಲ್, ನಟ ಪ್ರಕಾಶ್ ರಾಜ್ ಸಹಿತ ಕಾಕ್ರೋಚ್ ಜನತಾ ಪಕ್ಷಕ್ಕೆ ಬಂಬಲ ಸೂಚಿಸಿದ ಕೆಲವು ವಿಪಕ್ಷ ನಾಯಕರ ‘ಜಿರಲೆ’ ಭಾವಚಿತ್ರಕ್ಕೆ ರಾಸಾಯನಿಕ ಸಿಂಪಡಿಸಿ, ಕಲ್ಲಿನಿಂದ ಜಜ್ಜುವ ಮೂಲಕ ಆಕ್ರೋಶ ಹೊರ ಹಾಕಿದ್ದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಕಾಂಗ್ರೆಸ್, ಕಾಕ್ರೋಚ್ ಹಾಗೂ ಎಸ್‌ಡಿಪಿಐ ಸಹಿತ ರಾಷ್ಟ್ರವಿರೋಧಿ ಶಕ್ತಿಗಳ ಬೆಂಬಲದಿಂದ ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಪ್ರತಿ ಭಟನೆ ನಡೆದಿಲ್ಲ. ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಉದ್ದೇಶದಿಂದ ನಡೆದಿದೆ. ಜಂತ‌ರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಲ್ಲ. ಮುಂದಿನ ದಿನಗಳಲ್ಲಿ ಈ ಪ್ರತಿಭಟನೆಗಳ ಹಿಂದಿರುವ ಸತ್ಯ ಬಹಿರಂಗವಾಗಲಿದೆ. ಸದಾ ನಶೆಯಲ್ಲಿ ತೇಲುತ್ತಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ತಲೆಯಲ್ಲಿ ವಿಷಬೀಜ ಬಿತ್ತುವ ಮೂಲಕ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ. ತಮ್ಮ ತಂದೆಯನ್ನೇ ಕೊಂದ ಎಲ್‌ಟಿಟಿ ಜತೆ ಸೇರಿ ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿ ಸ್ಥಾನದ ಹಿರಿಮೆ ಮರೆತು ಅವರ ನಿವಾಸ ಮುಂದೆ ಧರಣಿ ನಡೆಸುವುದು ಖಂಡನೀಯ. ಪ್ರಧಾನಿ ಮೋದಿಗಾಗಿ ಜೀವಕೊಡಲು ನಾವು ಸಿದ್ಧರಿದ್ದೇವೆ ಎಂದು ಶಾಸಕ ಯಶ್ಪಾಲ್​ ಸುವರ್ಣ ಘೋಷಿಸಿದ್ದಾರೆ. ಕಾಂಗ್ರೆಸ್ ಸಮಾಜದಲ್ಲಿ ಉದ್ವಿಗ್ನತೆಯ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದರು. ನಟ ಪ್ರಕಾಶ್ ರಾಜ್ ಕರಾವಳಿಗೆ ಬಂದು ಅಧಿಕಪ್ರಸಂಗ ಮಾಡಿದರೆ ಸಮುದ್ರ ನೋಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

- Advertisement -

Related news

error: Content is protected !!