Saturday, June 29, 2024
spot_imgspot_img
spot_imgspot_img

ಉಡುಪಿ: ಕಾಪು ಲೀಲಾಧರ್ ಶೆಟ್ಟಿ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತ ಸೇರಿ ನಾಲ್ವರ ಬಂಧನ..!

- Advertisement -G L Acharya panikkar
- Advertisement -

ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ.

ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ಸಮಾಜಕ್ಕೆ ಹೆದರಿಕೊಂಡು, ಮರ್ಯಾದೆಗೆ ಅಂಜಿ ಮನನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪೊಲೀಸರು ಆರೋಪಿ ಗಿರೀಶ್ ವಿರುದ್ದ ಪೊಕ್ಸೊ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೊಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಎಸ್ಸೈ ಅಬ್ದುಲ್ ಖಾದರ್ ಮತ್ತವರ ತಂಡ ಈ ಕಾರ್ಯಚರಣೆ ನಡೆಸಿದೆ.

- Advertisement -

Related news

error: Content is protected !!