Friday, June 19, 2026
spot_imgspot_img
spot_imgspot_img

ಉಡುಪಿ: ಕಾರ್ಮಿಕರ ಮಧ್ಯೆ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯ..!

- Advertisement -
- Advertisement -

ಉಡುಪಿ: ಕಾರ್ಮಿಕರ ಮಧ್ಯೆ ನಡೆದ ಹೊಡೆದಾಟ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದೆ.

ಕಟಪಾಡಿ ಪೇಟೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್ ನಲ್ಲಿ ಒಡಿಶಾ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದು ಯಾವುದೋ ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.

ಕೊಲೆಯಾದ ಕಾರ್ಮಿಕ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಘಟನೆ ಬಳಿಕ ಸ್ಥಳದಲ್ಲಿದ್ದ 10 -15 ಕಾರ್ಮಿಕರು ಪಲಾಯನ ಮಾಡಿದ್ದಾರೆ.

ಸ್ಥಳಕ್ಕೆ ಉಡುಪಿ ಎಸ್‌ಪಿ ಹಾಕೇ ಅಕ್ಷಯ್ ಮಚ್ಚಿಂದ್ರ ಮತ್ತು ಡಿವೈಎಸ್‌ಪಿ, ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕೃಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!