ಉಡುಪಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕುರಿತಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅತ್ಯಂತ ಸಮರ್ಥವಾಗಿ ರಾಜ್ಯ ಮೆಚ್ಚುವಂತೆ ಎಲ್ಲಾ ರಾಜಕಾರಣಿಗಳು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅವರು ರಾಜ್ಯ ಮೆಚ್ಚುವಂತೆ ಎಲ್ಲಾ ರಾಜಕಾರಣಿಗಳು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ನೀಡುವ ಕಾರ್ಯಸೂಚಿ, ಮಾರ್ಗಸೂಚಿ, ಆದೇಶವನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ಮೂಲಕ ಕೊರೊನಾ ಮುಕ್ತ ಕರ್ನಾಟಕ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಪ್ರತಿ ಜಿಲ್ಲೆಯಲ್ಲೂ ಬ್ಲಾಕ್ ಫಂಗಸ್ ಗೆ ಆಸ್ಪತ್ರೆಗೆ ವ್ಯವಸ್ಥೆಗೊಳಿಸಿ ಅಲ್ಲಿ ಉಚಿತ ಚಿಕಿತ್ಸೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಮಾಡಿದೆ. ಕೊರೊನಾ ನಿಯಂತ್ರಣದಲ್ಲಿ ಗ್ರಾಮಪಂಚಾಯತ್ ಗಳಿಗೂ ಜವಾಬ್ದಾರಿ ನೀಡಿದೆ. ಕೊರೊನಾ ಸೋಂಕಿತರು ತರಲು ವಾಹನ ಖರೀದಿಸಲು ಪಂಚಾಯತ್ ಗಳಿಗೂ ಅವಕಾಶ ನೀಡಿದೆ ಎಂದು ತಿಳಿಸಿದ್ದಾರೆ.


