- Advertisement -
- Advertisement -



ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಯಾರಿಗೂ ಗಾಯಗಳಾಗಿಲ್ಲ. ಚಾಲಕನ ಅತಿ ವೇಗದ ಹಾಗೂ ನಿರ್ಲಕ್ಷ್ಯದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮಣಿಪಾಲ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸರಕಾರಿ ಬಸ್ಸು ದಾವಣಗೆರೆಯಿಂದ ಉಡುಪಿಗೆ ಆಗಮಿಸಿ ಅಲ್ಲಿಂದ ಮಣಿಪಾಲಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
- Advertisement -








