Tuesday, July 21, 2026
spot_imgspot_img
spot_imgspot_img

ಉಡುಪಿ: ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

- Advertisement -
- Advertisement -

ಉಡುಪಿ: ಗ್ಯಾಸ್ ಅಭಾವದ ಹೊತ್ತಲ್ಲೇ ಉಡುಪಿಯ ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದಿದ್ದು, ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ.

ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲೇ ಎಲ್‌ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಯಿತು.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಟ್ಯಾಂಕರ್‌ನಲ್ಲಿ ಸೋರಿಕೆ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿ, ಪಲ್ಟಿಯಾದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ ತಡೆಯಲು ನಿರಂತರ ನೀರು ಹಾಯಿಸಿದರು ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!