Monday, April 29, 2024
spot_imgspot_img
spot_imgspot_img

ಉಡುಪಿ: ಮಲ್ಪೆ ಮೀನುಗಾರಿಕಾ ಬೋಟ್ ರತ್ನಗಿರಿಯಲ್ಲಿ ಮುಳುಗಡೆ; ಮೀನುಗಾರರ ರಕ್ಷಣೆ

- Advertisement -G L Acharya panikkar
- Advertisement -

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ ಆನಂತಕೃಷ್ಣ ಬೋಟು ರತ್ನಗಿರಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಬೋಟಿನ ಒಳಗೆ ನೀರು ಬರಲಾರಂಭಿಸಿತು.

ಇನ್ನು ತಕ್ಷಣ ಸಮೀಪದಲ್ಲಿದ್ದ ಮೀನಾಕ್ಷಿ ಮತ್ತು ಗಾಯತ್ರಿ ರಕ್ಷಾ ಬೋಟಿನವರು ಈ ಬೋಟಿನಲ್ಲಿದ್ದ 7 ಮಂದಿಯನ್ನು ರಕ್ಷಿಸಿದರು.

ಬೋಟನ್ನು ರಕ್ಷಣೆ ಮಾಡಲು ಸಾಧ್ಯವಾಗದೆ ಮುಳುಗಿದೆ. 6 ಲಕ್ಷ ರೂ. ಮೌಲ್ಯದ ಮೀನು, ಬಲೆ, ಡೀಸೆಲ್ ಸೇರಿದಂತೆ ಸುಮಾರು 60 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!