Thursday, July 23, 2026
spot_imgspot_img
spot_imgspot_img

ಉಡುಪಿ: ಸನ್ಯಾಸಿ ವೇಷ ಧರಿಸಿ ನಕಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ

- Advertisement -
- Advertisement -

ಉಡುಪಿ: ಸನ್ಯಾಸಿ ವೇಷ ಧರಿಸಿಕೊಂಡು ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ವಂಚಕನೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಾಗಿದ್ದರು.

ವಂಚಕ ನಕಲಿ ಹುಲಿ ಉಗುರನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಾರ್ವಜನಿಕರು ನಾಗರಿಕ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, ಆತ ಪರಾರಿಯಾಗಲು ಯತ್ನಿಸಿದಾಗ ನಗರ ಪೋಲಿಸ್ ಠಾಣೆಯ ಪೋಲಿಸರು ನಗರದ ಹಳೆ ಬಸ್ಸು ನಿಲ್ದಾಣದಲ್ಲಿ ವಶಕ್ಕೆ ಪಡೆದು ಬಳಿಕ, ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!