Tuesday, July 21, 2026
spot_imgspot_img
spot_imgspot_img

ಉಡುಪಿ: ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು!

- Advertisement -
- Advertisement -

ಮಣಿಪಾಲ: ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಹಿಂಭಾಗದಲ್ಲಿ ಮಾವಿನಕಾಯಿ ಕಟಾವು ನಡೆಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಅಲೆವೂರು ಗ್ರಾಮದ ನಿವಾಸಿ ಸದಾನಂದ ದೇವಾಡಿಗ(55) ಎಂದು ಗುರುತಿಸಲಾಗಿದ್ದು, ಅವರು ಗ್ರಾಮ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮರದ ಮೇಲಿಂದ ವಿದ್ಯುತ್ ತಂತಿ ಹಾದು ಹೋಗಿದ್ದರಿಂದ, ಮಾವು ಕಟಾವು ಮಾಡಲು ಬಳಸಿದ ಕಬ್ಬಿಣದ ನಳಿಕೆ ತಂತಿಗೆ ತಗುಲಿದ ಪರಿಣಾಮ ವಿದ್ಯುತ್ ಹರಿದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ತೆರವುಗೊಳಿಸಲು ಸಹಕರಿಸಿದರು ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!