Monday, June 15, 2026
spot_imgspot_img
spot_imgspot_img

ಉಡುಪಿ: ಕೂಲಿ ಕೆಲಸಕ್ಕೆ ತೆರಳಿದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

- Advertisement -
- Advertisement -

ಉಡುಪಿ: ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆ ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಕೆಳಪೇಟೆಯಲ್ಲಿ ನಡೆದಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಸುರೇಂದ್ರ ನಾಯ್ಕ(36) ಎಂದು ಗುರುತಿಸಲಾಗಿದೆ.

ಸುರೇಂದ್ರ ನಾಯ್ಕ ಎಂಬವರು ಜೂ.28ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!