Tuesday, July 21, 2026
spot_imgspot_img
spot_imgspot_img

ಉಡುಪಿ: ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ: ಆರೋಪಿಯ ಬಂಧನ!

- Advertisement -
- Advertisement -

ಉಡುಪಿ: ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಕರಂಬಳ್ಳಿ ರಾಮಬೆಟ್ಟು ಸಮೀಪ ಬಂಧಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಬಂಧಿತ ಆರೋಪಿ. ಈತನಿಂದ 15,000ರೂ. ಮೌಲ್ಯದ 7.59 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮತ್ತು ಮಾರಾಟ ಮಾಡಿ ಗಳಿಸಿದ್ದ 3100ರೂ. ನಗದು ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 3,23,100ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮಾರ್ಗದರ್ಶನದಲ್ಲಿ ಉಡುಪಿ ನಗರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ಎಸ್ಸೈಗಳಾದ ಭರತೇಶ ಕಂಕಣವಾಡಿ, ಗೋಪಾಲ ಕೃಷ್ಣ ಜೋಗಿ ಹಾಗೂ ಸಿಬ್ಬಂದಿ ಹರೀಶ್ ನಾಯ್ಕ, ಪ್ರಸನ್ನ ಸಿ.ನೇತ್ರಾವತಿ, ಸತೀಶ್ ಪಳ್ಳಿ, ಹೇಮಂತ್ ಕುಮಾ‌ರ್, ಸಂತೋಷ್ ರಾಥೋಡ್, ಆನಂದ ಪಾಲ್ಗೊಂಡಿದ್ದರು.

- Advertisement -

Related news

error: Content is protected !!