- Advertisement -
- Advertisement -



ಉಡುಪಿ: ಕೇವಲ ಒಂದು ತಿಂಗಳ ಹಿಂದೆಯಷ್ಟೇ ಖರೀದಿಸಿದ್ದ ಹೊಸ ಸ್ಕೂಟರ್ ಅನ್ನು ಮನೆಯಂಗಳದಲ್ಲಿ ನಿಲ್ಲಿಸಿದ್ದ ಸಂದರ್ಭದಲ್ಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶಿರ್ವ ಸಮೀಪದ ಪಂಜಿಮಾರು ಪಾಲಮೆಯಲ್ಲಿ ಮಂಗಳವಾರ ನಡೆದಿದೆ.
ಪಾಲಮೆಯ ನಿವಾಸಿಯೊಬ್ಬರು ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಈ ಸ್ಕೂಟರ್ ಖರೀದಿಸಿದ್ದರು. ಈ ಬಗ್ಗೆ ಮಾತನಾಡಿದ ಸ್ಕೂಟರ್ ಮಾಲೀಕರು, “ನಾನು ಸ್ಕೂಟರ್ ಅನ್ನು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಖರೀದಿಸಿ ಮನಗೆ ತಂದಿದ್ದೆ. ಮಧ್ಯಾಹ್ನ ಅಂಗಳದಲ್ಲಿ ಪಾರ್ಕ್ ಮಾಡಿದ್ದೆ, ಅಷ್ಟರಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆ ಕೆಲವೇ ಸೆಕೆಂಡುಗಳಲ್ಲಿ ಗಾಡಿ ಸಂಪೂರ್ಣ ಸುಟ್ಟು ಕರಕಲಾಯಿತು” ಎಂದು ತಿಳಿಸಿದ್ದಾರೆ.
ಶಿರ್ವ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಟ್ಟ ವಾಹನದ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಅಪಾಯವುಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -








