Saturday, June 13, 2026
spot_imgspot_img
spot_imgspot_img

ಉಡುಪಿ: ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

- Advertisement -
- Advertisement -

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಡುಪಿ ಅಂಬಾಗಿಲು ಬಿರಿಯಾನಿ ಸ್ಪಾಟ್ ಹೋಟೆಲ್ ಎದುರುಗಡೆ ರಾಹೆ-66 ರಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಜಯರಾಮ್ (67) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌, ರಸ್ತೆ ದಾಟುತ್ತಿದ್ದ ಜಯರಾಮ್ ಅವರಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!