

ಉಡುಪಿ : ವೇಶ್ಯಾವಾಟಿಕೆ ದಂಧೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಪೆರಪಳ್ಳಿಯಲ್ಲಿ ನಡೆದಿದೆ.
ಪೆರಂಪಳ್ಳಿಯ ಅರ್ಪಾಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಚಿಕ್ಕ ಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಮತ್ತು ದಾವರಣಗೆರೆ ಜಿಲ್ಲೆಯ ಹರಿಹರ ನಿವಾಸಿ ಅಮೀನಾ ಬೇಗಂ (55) ಎಂಬ ಇಬ್ಬರನ್ನು ದಸ್ತಗಿರಿ ಮಾಡಿ ಅವರು ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದ ಬೆಂಗಳೂರು ಮೂಲದ ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹಾಸನ ಜಿಲ್ಲೆಯ ಹಿರೀಸಾವೆ ಗ್ರಾಮದ ರವೀಶ್ ಎಂಬ ಆರೋಪಿ ಬಂಧನಕ್ಕೆ ಮಣಿಪಾಲ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ ಡಿವೈಎಸ್‌ಪಿ ಪ್ರಭು ಡಿ. ಅವರ ನಿರ್ದೇಶನದಂತೆ ಮಣಿಪಾಲ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪಿ.ಐ ದೇವರಾಜ್ ಟಿ. ವಿ. ನೇತೃತ್ವದಲ್ಲಿ ಪಿಎಸ್‌ಐ ಅನಿಲ್, ಎಎಸ್‌ಐ ವಿವೇಕ್ ಹಾಗೂ ಸಿಸಿಬಂದಿ ವಿದ್ಯಾ, ಇಮ್ರಾನ್, ಪ್ರಸನ್, ಮಂಜುನಾಥ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿತು.