Tuesday, June 23, 2026
spot_imgspot_img
spot_imgspot_img

ಉಡುಪಿ: ಹೆಸರಿಗೆ ಮಾತ್ರ ಯಾತ್ರಿ ನಿವಾಸ..! ಲಾಡ್ಜ್ ನಲ್ಲಿ ನಡೆಯುತಿತ್ತು ಹೈಟೆಕ್ ವೇಶ್ಯಾವಾಟಿಕೆ!

- Advertisement -
- Advertisement -

ಉಡುಪಿ : ಇಲ್ಲಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹುಡುಗಿಯರನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳು ಗುರುರಾಜ್,ವಿಜಯ ಶೆಟ್ಟಿ, ಹೇಮಂತ್,ಸಂದೀಪ್ ಮೊಗವೀರ ಎನ್ನಲಾಗಿದೆ. ಲಾಡ್ಜ್ ನ ಮಾಲೀಕ ರಮೇಶ್ ಶೆಟ್ಟಿ ಮೇಲೆ ಉಡುಪಿ ಪೊಲೀಸರು ಕೇಸ್ ದಾಖಲಿಸಿದ್ದು, ಆತ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಉಡುಪಿ ನಗರದ ಹೃದಯ ಭಾಗದಲ್ಲಿರುವ ಎಸ್‌ಆರ್ ಯಾತ್ರಿ ನಿವಾಸ ಎಂಬ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು ಅವರ ತಂಡ ದಾಳಿ‌ ನಡೆಸಿದಾಗ ಇಬ್ಬರು ಹುಡುಗಿಯರು ಮತ್ತು ನಾಲ್ಕು ಮಂದಿ‌ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಐದು ಮಂದಿ ಮೇಲೆ ಕೇಸು ದಾಖಲಿಸಿಕೊಂಡು ನಾಲ್ಕು ಮಂದಿ ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!