Saturday, June 28, 2025
spot_imgspot_img
spot_imgspot_img

ಉಡುಪಿ: ಮಲ್ಪೆ ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ..!

- Advertisement -
- Advertisement -

ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಸಮುದ್ರ ಪಾಲಾಗುತ್ತಿದ್ದ ಬಾಲಕ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ಎಂದು ಗುರುತಿಸಲಾಗಿದೆ.

ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!