Sunday, June 7, 2026
spot_imgspot_img
spot_imgspot_img

ಉಡುಪಿ: ನಿಂತಿದ್ದ ಬಸ್‌ಗೆ ಸ್ಕೂಟರ್ ಢಿಕ್ಕಿ; ಸವಾರಿಬ್ಬರು ಗಂಭೀರ..!

- Advertisement -
- Advertisement -

ಉಡುಪಿ: ನಿಂತಿದ್ದ ಬಸ್‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ ದ್ವಿಚಕ್ರ ಬಂದ ಯುವಕರಿಬ್ಬರು ರಸ್ತೆ ಬದಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದೆ. ಆ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡ ಇಬ್ಬರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!