- Advertisement -
- Advertisement -
ಉಡುಪಿ: ಕೋವಿಡ್- 19 ಪಾಸಿಟಿವ್ ಪ್ರಕರಣಗಳು ದಿನೆದಿನೇ ಹೆಚ್ಚುತಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮವಾಗಿ (ನಾಳೆ) ಬುಧವಾರ ರಾತ್ರಿಯಿಂದ 14 ದಿನಗಳವರೆಗೇ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡುವ ನಿರ್ಧಾರವನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕೋವಿಡ್ 19 ತಡೆಗಟ್ಟುವಿಕೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಅಧಿಕಾರಿಗಳು ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಲಾಕ್ ಡೌನ್ ಮಾಡುವುದು ಬೇಡ 14 ದಿನಗಳವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸೀಲ್ಡೌನ್ ಮಾಡುವುದಾಗಿ ತೀರ್ಮಾನಿಸಲಾಯಿತು.ಉಡುಪಿ ಜಿಲ್ಲಾ ಗಡಿಭಾಗದಿಂದ ಹೊರಗೆ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಬುಧವಾರ ರಾತ್ರಿ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.ಭಾನುವಾರ ಸಂಪೂರ್ಣ ಲಾಕ್ಡೌನ್ ಯಥಾಸ್ಥಿತಿ ಮುಂದುವರೆಯುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
- Advertisement -