- Advertisement -
- Advertisement -




ಪುತ್ತೂರು: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಶೀರೂರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವೇದವರ್ಧನ ಶ್ರೀಪಾದಂಗಳವರಿಗೆ ಪುತ್ತೂರಿನಲ್ಲಿ ಭವ್ಯ ಪೌರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಈ ಪೌರ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 31, 2025ರ ಸಂಜೆ 6.30ಕ್ಕೆ ನಡೆಯಲಿದೆ. ಧಾರ್ಮಿಕ-ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಗಣ್ಯರು ಹಾಗೂ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠಾರೋಹಣದ ಅಂಗವಾಗಿ ಆಯೋಜಿಸಿರುವ ಈ ಸನ್ಮಾನ ಕಾರ್ಯಕ್ರಮವು ಭಕ್ತಿ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂಯೋಜನೆಯಾಗಿ ನಡೆಯಲಿದೆ.
ಈ ವಿಶೇಷ ಸಂದರ್ಭದಲ್ಲಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜಕರು ವಿನಂತಿಸಿದ್ದಾರೆ.
- Advertisement -








