- Advertisement -
- Advertisement -



ಉಡುಪಿ : ಶಾಲಾ ವಿಧ್ಯಾರ್ಥಿನಿ ಮೇಲೆ ಬೀದಿ ಬದಿ ನಾಯಿಗಳು ದಾಳಿ ನಡೆಸಿದ್ದು, ಮಗು ಅಪಾಯದಿಂದ ಪಾರಾದ ಘಟನೆ ಘಟನೆ ಉಡುಪಿಯ ಹೂಡೆ ಪರಿಸರದಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಕೈಯಲ್ಲಿ ಕೊಡೆ ಹಿಡಿದು ನಿಂತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ಆಕ್ರಮಣಕಾರಿಯಾಗಿ ದಾಳಿ ನಡೆಸಿವೆ. ನಾಲ್ಕೈದು ನಾಯಿಗಳು ಒಮ್ಮೆಲೇ ಅಟ್ಯಾಕ್ ಮಾಡಿದ ಹಿನ್ನೆಲೆಯಲ್ಲಿ ಬಾಲಕಿ ಕೂಗಿ ಬೊಬ್ಬೆ ಹಾಕಿದ್ದಾರೆ. ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳಿಂದ ರಕ್ಷಿಸಿಕೊಂಡು ವಿದ್ಯಾರ್ಥಿನಿ ಬಚಾವಾಗಿದ್ದಾರೆ.
ವಿದ್ಯಾರ್ಥಿನಿಯ ಮೇಲೆ ನಡೆದ ನಾಯಿ ದಾಳಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಹೂಡೆ ಪರಿಸರದಲ್ಲಿ ಬೀದಿ ನಾಯಿಗಳ ಕಾಟದಿಂದ ಸ್ಥಳೀಯರು ಬೇಸತ್ತು ಹೋಗಿದ್ದಾರೆ. ಈ ಬೀದಿ ನಾಯಿಗಳ ಕಾಟದಿಂದ ಮುಕ್ತಿ ನೀಡುವಂತೆ ಹಲವು ದಿನಗಳಿಂದ ಸ್ಥಳೀಯರು ಬೇಡಿಕೆಯಿಡುತ್ತಲೇ ಇದ್ದಾರೆ.
- Advertisement -