Tuesday, May 7, 2024
spot_imgspot_img
spot_imgspot_img

ಉಡುಪಿ: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಉಡುಪಿ: ವಿದ್ಯಾರ್ಥಿಯೋರ್ವ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಉಡುಪಿ ಮಾಹೆಯ ಅಲೈಯ್ಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಎಂದು ಗುರುತಿಸಲಾಗಿದೆ.

ಪರೀಕ್ಷಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಶಂಕಿಸಲಾಗದೆ. ಕಾಲೇಜು ಕಟ್ಟಡದ ಒಳಗಿನ ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಯಾಗಿದೆ. ಆತ್ಮಹತ್ಯೆಯ ದೃಶ್ಯ ನೋಡಿದ ವಿದ್ಯಾರ್ಥಿಗಳು ಗಲಿಬಿಲಿಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾರ್ಥಿ ಬಿದ್ದೊಡನೆ ಸ್ಥಳದಲ್ಲಿದ್ದವರು ಓಡುವ ದೃಶ್ಯ ಕೂಡ ಸೆರೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು,ಸ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!