- Advertisement -
- Advertisement -


ಉಡುಪಿ: ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ. ಮೃತ ಮಹಿಳೆ ಉಡುಪಿ ನಗರದ ಹೊರವಲಯದ ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ (48) ಎನ್ನಲಾಗಿದೆ.


ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ.
ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -








