Friday, June 5, 2026
spot_imgspot_img
spot_imgspot_img

ಉಡುಪಿ: ಸ್ಕೂಟರ್‌ಗೆ ಟ್ಯಾಂಕರ್‍ ಡಿಕ್ಕಿ; ಸವಾರ ಮೃತ್ಯು..!

- Advertisement -
- Advertisement -

ಉಡುಪಿ: ನೀರಿನ ಟ್ಯಾಂಕರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಉಡುಪಿ ದೊಡ್ಡಣಗುಡ್ಡೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎಪಿಎಂ ಸಿಟಿ ಬಸ್ ಚಾಲಕ ಮಂಜುನಾಥ್ (36) ಎಂದು ಗುರುತಿಸಲಾಗಿದೆ.

ಅವರು ಸಂಜೆ ತಮ್ಮ ಸ್ಕೂಟರ್ ನಲ್ಲಿ ಬಾಳಿಗ ಹಾಸ್ಪಿಟಲ್ ದೊಡ್ಡಣಗುಡ್ಡೆಯಿಂದ ಪೆರಂಪಳ್ಳಿಯ ತಮ್ಮ ಬಾಡಿಗೆ ಮನೆಗೆ ಹೋಗುತ್ತಿದ್ದರು. ಈ ವೇಳೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಮಂಜುನಾಥ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರು ತಮ್ಮ ಮಗಳ 2ನೇ ವರ್ಷದ ಹುಟ್ಟುಹಬ್ಬದ ಆಚರಣೆಗಾಗಿ ಕೇಕ್ ಕೊಂಡು ಹೋಗುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!