Sunday, July 19, 2026
spot_imgspot_img
spot_imgspot_img

ಉಡುಪಿ: ಟೆಂಪೋ-ಬೈಕ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಟೆಂಪೋ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಣಿಪಾಲದ ಅತ್ರಾಡಿಯ ಕಬ್ಯಾಡಿಯ ಅರ್ಮನ್ ಕಾರ್ಖಾನೆ ಬಳಿ ಸೋಮವಾರ ನಡೆದಿದೆ.

ಮೃತರನ್ನು ಹೆರ್ಗಾ ಗ್ರಾಮದ ಭಾಸ್ಕರ್ ನಾಯಕ್ (70) ಎಂದು ಗುರುತಿಸಲಾಗಿದೆ.

ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ಚಲಿಸುತ್ತಿದ್ದ ಟೆಂಪೋ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ವಾಹನದ ಸಮೇತ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಭಾಸ್ಕರ್ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್‌ನ ಹಿಂಬದಿ ಸವಾರನ ಕಾಲು ಕತ್ತರಿಸಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!