

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ನಡೆದಿದೆ.
ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಣಿಪಾಲದಿಂದ ಬಂದ ಶಿಫ್ಟ್ ಕಾರು ಚಾಲಕನು ಗರೋಡಿ ರಸ್ತೆಯ ತೆರಳುವ ಸಲುವಾಗಿ ಒಮ್ಮೇಲೆ ಎಡಕ್ಕೆ ತಿರುಗಿದ್ದಾನೆ. ಈ ವೇಳೆ ಹಿಂದಿನಿಂದ ಅತೀ ವೇಗದಲ್ಲಿ ಬರುತ್ತಿದ್ದ ರಿಡ್ಜ್ ಕಾರು ಚಾಲಕನು ನಿಯಂತ್ರಣ ಕಳೆದುಕೊಂಡ ಪರಿಣಾಮ ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಅಲ್ಲೇ ಇದ್ದ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದ ರಭಸಕ್ಕೆ ಎರಡು ಕಾರುಗಳು ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ್ದು, ಪರಿಣಾಮ ಎರಡು ಕಾರುಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಹಾನಿ ಉಂಟಾಗಿದ್ದು, ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.








