Monday, August 3, 2026
spot_imgspot_img
spot_imgspot_img

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್‌ಗೆ ಡಿಕ್ಕಿ ಹೊಡೆದ ಕಾರು..!

- Advertisement -
- Advertisement -

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಂಪ್ ಹೌಸ್‌ಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ.

ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೋಲೆನೋ ಕಾರಿನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಮಣಿಪಾಲದಿಂದ ಈಶ್ವರ ನಗರವರೆಗೆ ಕಾಂಕ್ರೀಟ್ ರಸ್ತೆ ಇದ್ದು ನಂತರ ಮಣ್ಣಿನ ರಸ್ತೆ ಗೋಚರಿಸುತ್ತದೆ ಚಾಲಕರಿಗೆ ನಂತರ ದಿಕ್ಕು ತಪ್ಪಿಸುವ ಪಾಯಿಂಟ್ ಇದಾಗಿದ್ದು. ನಗರಸಭೆ ಪಂಪ್ ಹೌಸಿಗೆ ಯಾವುದೇ ಭದ್ರತೆ ಒದಗಿಸಿಲ್ಲ. ಗೋಡೆ ಕೂಡ ನಿರ್ಮಿಸಿ ಇಲ್ಲ. ರಾಷ್ಟ್ರೀಯ ಹೆದ್ದಾರಿಗೆ ಬಿಟ್ಟುಕೊಟ್ಟ ಜಾಗ ನಂತರ ಯಾವುದೇ ಬೇಲಿ ನಿರ್ಮಿಸಿ ಇಲ್ಲ ಇದು ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

Related news

error: Content is protected !!