Saturday, June 28, 2025
spot_imgspot_img
spot_imgspot_img

ಉಡುಪಿ: ವಿದೇಶದಿಂದ ಬಂದು ಮೀನು ಮಾರುತ್ತಿದ್ದ ಅಮ್ಮನಿಗೆ ​​ಸರ್ಪ್ರೈಸ್ ನೀಡಿದ ಮಗ; ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್

- Advertisement -
- Advertisement -

ಉಡುಪಿ: ಮೂರು ವರ್ಷಗಳ ಬಳಿಕ ತಾಯಿನಾಡಿಗೆ ಮರಳಿದ ತಾಯಿಗೆ ಸರ್ಪ್ರೈಸ್ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿದೆ. ಉಡುಪಿಯ ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರುಷಗಳ ನಂತರ ದುಬೈನಿಂದ ತಾಯ್ನಾಡಿಗೆ ಮರಳಿದ್ದರು.

ಮನೆಯವರಿಗೆ, ಮಿತ್ರರಿಗೆ ಸರ್ಪ್ರೈಸ್ ನೀಡುವ ನಿಟ್ಟಿನಿಂದ ತಾವು ಬರುವ ಕುರಿತು ಯಾವುದೇ ಮಾಹಿತಿ ನೀಡದೆ ಊರಿಗೆ ಮರಳಿದ್ದರು. ಮನೆಗೆ ಮರಳಿದಾಗ ಮನೆಯವರೆಲ್ಲ ರೋಹಿತ್‌ನನ್ನು ಎದುರುಗೊಂಡರು ತಾಯಿ ಮನೆಯಲ್ಲಿ ಇರದಿರುವುದನ್ನು ಕಂಡು ಬೇಸರಗೊಂಡಿದ್ದ ರೋಹಿತ್, ನೇರವಾಗಿ ಗಂಗೊಳ್ಳಿ ಬಂದರು ಬಳಿ ತಾಯಿ ಮೀನು ಮಾರುವ ಸ್ಥಳಕ್ಕೆ ತೆರಳಿದ್ದಾರೆ.

ತಾಯಿ ಸುಮಿತ್ರ ಮೀನು ಮಾರುತ್ತಿದ್ದಲ್ಲಿಗೆ ತೆರಳಿದ್ದ ರೋಹಿತ್ ತಲೆಗೆ ಟೋಪಿ ಹಾಕಿ ಮುಖಕ್ಕೆ ಕರವಸ್ತ್ರ ಕಟ್ಟಿ ಕನ್ನಡಕ ಹಾಕಿ ಮೀನು ಖರೀದಿಯ ನಾಟಕವಾಡಿದ್ದಾನೆ. ತನ್ನ ಬಳಿ ಮೀನು ಖರೀದಿಸಲು ಬಂದ ವ್ಯಕ್ತಿಯ ಹಾವಭಾವ ಗಮನಿಸಿದ ತಾಯಿಗೆ, ಇದು ತನ್ನ ಮಗನೇ ಎಂದು ಹೆತ್ತು ಕರುಳು ಹೇಳಿದೆ. ತಕ್ಷಣ ತನ್ನ ಮಗನನ್ನು ಬಿಗಿದಪ್ಪಿ ಆನಂದ ಭಾಷ್ವ ಹರಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

- Advertisement -

Related news

error: Content is protected !!