Monday, June 15, 2026
spot_imgspot_img
spot_imgspot_img

ಉಡುಪಿ: ಜ್ಯುವೆಲರಿ ವರ್ಕ್ ಶಾಪ್‌ನಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಉಡುಪಿ: ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ಶಟರ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!