- Advertisement -
- Advertisement -


ಉಡುಪಿ: ಭಾರತೀಯ ಸ್ಟೇಟ್ ಬ್ಯಾಂಕ್ ಸಂತೆಕಟ್ಟೆ ಶಾಖೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಶಾಖೆಯ ಕಿಟಕಿಯ ಸರಳನ್ನು ಕತ್ತರಿಸಿ ಒಳನುಗ್ಗಿದ ಕಳ್ಳರು, ಕಚೇರಿಯಲ್ಲಿದ್ದ 2,50,000ರೂ. ಮೌಲ್ಯದ ಚೆಕ್‌ನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -