Saturday, June 20, 2026
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ಸಹೋದರಿಯರಿಬ್ಬರು ವಾಪಾಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಸಹೋದರಿಯರು ಎಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಪತ್ತೆಯಾದವರನ್ನು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂದು ಗುರುತಿಸಲಾಗಿದೆ.

ಮಂಜುಳಾ ಅವರು 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರಿಗೆ ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿದ್ದಾರೆ. ಮಲ್ಲಿಕಾ (18) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಹತ್ತನೇ ತರಗತಿವರೆಗೆ ಶಾಲೆಗೆ ಹೋಗಿದ್ದು, ಬಳಿಕ ಮನೆಯ ಲ್ಲಿಯೇ ಇದ್ದಾರೆ. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!