Wednesday, July 29, 2026
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆ

- Advertisement -
- Advertisement -

ಉಡುಪಿ: ಫ್ಲಾಟ್‌ವೊಂದರಲ್ಲಿ ವಾಸವಿದ್ದ ಮಹಿಳೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾಪು ತಾಲೂಕು ಕೊಪ್ಪಲಂಗಡಿಯಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯನ್ನು ನೂರ್‌ಬಾನು (35) ಎಂದು ಗುರುತಿಸಲಾಗಿದೆ.

ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್‌ಬಾನು ಅಕ್ಟೋಬರ್ 29ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪವಿಭಾಗ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂ.ಸಂಖ್ಯೆ: 08258- 231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820- 2572333, ಮೊ.ನಂ: 9480805431, ಕಾಪು ಪೊಲೀಸ್ ಠಾಣೆ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!