Saturday, April 27, 2024
spot_imgspot_img
spot_imgspot_img

ಉಡುಪಿ: ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!

- Advertisement -G L Acharya panikkar
- Advertisement -

ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ.

ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ.

ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೆ ಮುಳುಗಿರುವ ಸಾಧ್ಯತೆ ಇದೆ. ಶೃಂಗೇರಿಯಲ್ಲಿ ವೈದ್ಯರಾಗಿರುವ ಡಾ. ದೀಪಕ್ ಹಾಗೂ ಶಿವಮೊಗ್ಗದ ವ್ಯಾಪಾರಿ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

- Advertisement -

Related news

error: Content is protected !!