- Advertisement -
- Advertisement -


ಕುಂದಾಪುರ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಈ ಘಟನೆ ಸಂಭವಿಸಿದೆ.
ಎಸ್.ವಿ.ಎಸ್.ಎಂ. ಎಂಬ ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಚಾಲಕ ಬಸ್ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಸಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ಬೈಂದೂರು ಕಡೆಯಿಂದ ಕುಂದಾಪುರಕ್ಕೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.


- Advertisement -








