Monday, June 8, 2026
spot_imgspot_img
spot_imgspot_img

ಉಡುಪಿ: ಇಂದಿನಿಂದ ಶ್ರೀ ಕ್ರಷ್ಣ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ

- Advertisement -
- Advertisement -

ಉಡುಪಿ: ಇಂದಿನಿಂದ ಶ್ರೀಕೃಷ್ಣ, ಮುಖ್ಯಪ್ರಾಣರ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ಕೊಡಲಾಗಿದೆ. ಅಪರಾಹ್ನ 2 ರಿಂದ ಸಂಜೆ 6 ರವರೆಗೆ ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂರು ತಿಂಗಳ ಬಳಿಕ ಶ್ರೀಕೃಷ್ಣ ಮಠ ಭಕ್ತರಿಗಾಗಿ ಮತ್ತೆ ತೆರೆದುಕೊಳ್ಳಲಿದೆ. 2022 ರಲ್ಲಿ ನಡೆಯುವ ಶ್ರೀಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥರ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳಲ್ಲಿ ಮೂರನೇಯದಾದ ಕಟ್ಟಿಗೆ ಇಂದು ಬೆಳಿಗ್ಗೆ 8.45ಕ್ಕೆ ನಡೆಯಲಿದೆ.

- Advertisement -

Related news

error: Content is protected !!