Thursday, April 25, 2024
spot_imgspot_img
spot_imgspot_img

13 ವಿವಿಧ ಆನ್‌ಲೈನ್ ಕೋರ್ಸ್‌ಗಳ ಆರಂಭಕ್ಕೆ ಯುಜಿಸಿ ಅನುಮತಿ-ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌

- Advertisement -G L Acharya panikkar
- Advertisement -

ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆನ್ಲೈನ್ ಕೋರ್ಸ್’ಗಳಿಗೆ ಆದ್ಯತೆ ನೀಡಿದ್ದು, 13 ವಿವಿಧ ಆನ್‌ಲೈನ್ ಕೋರ್ಸ್‌ಗಳ ಆರಂಭಕ್ಕೆ ಯುಜಿಸಿ ಅನುಮತಿ ನೀಡಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ತಿಳಿಸಿದ್ದಾರೆ.


ಬುಧವಾರ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ವಿ.ವಿ ಶಿಕ್ಷಣ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಲ್ಲಿ 13 ಆನ್‌ಲೈನ್‌ ಕೋರ್ಸ್‌’ಗಳ ಆರಂಭಕ್ಕೆ ಅವಕಾಶ ಲಭಿಸಿದೆ. ಮುಂದಿನ ವರ್ಷಗಳಲ್ಲಿ ಈ ಸಂಖ್ಯೆಯನ್ನು ಬೇಡಿಕೆಗೆ ತಕ್ಕಂತೆ ಹೆಚ್ಚಿಸಲು ಯುಜಿಸಿಯ ಅನುಮತಿ ದೊರೆಯಲಿದೆ. ಯುಜಿಸಿ ಮಾರ್ಗಸೂಚಿಯಂತೆ ಆನ್‌ಲೈನ್‌ ಕೋರ್ಸ್‌ ಆರಂಭಿಸಲಾಗುವುದು ಎಂದರು.


ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 100ರ ಒಳಗಿರುವ ವಿವಿಗಳು ಆನ್‌ಲೈನ್ ಕೋರ್ಸ್ ಆರಂಭಿಸಬಹುದಾಗಿದೆ. ಮೈಸೂರು ವಿ.ವಿ ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ನಲ್ಲಿ 27 ನೇ ಸ್ಥಾನದಲ್ಲಿದ್ದು ಆನ್‌ಲೈನ್ ಕೋರ್ಸ್ ಆರಂಭಕ್ಕೆ ಅರ್ಹತೆ ಹೊಂದಿದೆ. ಈ ಸಾಲಿನಲ್ಲಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊಸ ಕೋರ್ಸ್, ಕಾಂಬಿನೇಷನ್‌ಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.


ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳಿಂದ ಒಟ್ಟು 169 ಪ್ರಥಮ ದರ್ಜೆ ಕಾಲೇಜುಗಳ ಸಂಯೋಜನೆ ಮುಂದುವರಿಕೆಗೆ ಸಭೆಯಲ್ಲಿ ಸಭೆ ಅನುಮತಿ ನೀಡಿದೆ.
ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹೆಚ್ಚೆಚ್ಚು ಕೋರ್ಸ್‌ಗಳನ್ನು ಆನ್‌ಲೈನ್‌ನಲ್ಲಿ ಅಳವಡಿಸುವ ಸಂಬಂಧ ಚಿಂತನೆ ನಡೆಸಬೇಕು ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ಸೂಚಿಸಿದ್ದಾರೆ.

- Advertisement -

Related news

error: Content is protected !!