Friday, June 5, 2026
spot_imgspot_img
spot_imgspot_img

ಉಜಿರೆ: ಬೈಕ್ -ಟ್ಯಾಂಕರ್ ನಡುವೆ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮೃತ್ಯು

- Advertisement -
- Advertisement -

ಉಜಿರೆ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ.3ರಂದು ಉಜಿರೆಯ ಹಳ್ಳಿಮನೆ ಸಮೀಪ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತಪಟ್ಟ ಬೈಕ್ ಸವಾರನನ್ನು ಕಡಿರುದ್ಯಾವರ ನಿವಾಸಿ ಪುರುಷೋತ್ತಮ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಬೈಕ್ ಸಂಪೂರ್ಣ ಹಾನಿಯಾಗಿದ್ದು, ಬೈಕ್ ಸವಾರ ಪುರುಷೋತ್ತಮರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆ. 4ರಂದು ನಿಧನರಾದರು. ಮೃತರು ಗಾರೆ ಕಾರ್ಮಿಕರಾಗಿದ್ದರು. ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!